ಪುಂಜಾಲಕಟ್ಟೆ: ಬುರೂಜ್ ಆಂಗ್ಲ ಮಾಧ್ಯಮ ಫ್ರೌಡಶಾಲೆ ರಝಾನಗರ ಇಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವಾಮದಪದವು ಇದರ ವತಿಯಿಂದ “ವೀರ ಯೋಧನಿಗೆ ನಮನ ” ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಸ್ಕೌಟ್ 63 ರಾಷ್ಟ್ರೀಯ ರೈಫಲ್ ಕ್ಯಾ.ಎಂ.ವಿ.ಪ್ರಾಂಜಲ್ ಹುತಾತ್ಮ ವೀರ ಯೋಧನಿಗೆ ಗೌರವಾರ್ಥವಾಗಿ ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು.
ಮೊದಲು ಸ್ಕೌಟ್ಸ್ ಗೈಡ್ಸ್ ಪ್ರಾರ್ಥನೆಯೊಂದಿಗೆ ಆರಂಭ ಮಾಡಿ ನಂತರ ವೀರ ಯೋಧನ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಗೌರವ ಸಮರ್ಪಣೆ ಮಾಡಲಾಯಿತು.ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ರವರ ಜೀವನಚರಿತ್ರೆ ಬಗ್ಗೆ ಶಿಕ್ಷಕಿ ಶೋಭಾರವರು ವಿವರಿಸಿದರು.
ಅವರ ಗೌರವರ್ಪಣೆಗಾಗಿ ಶಾಲಾ ಆವರಣದ ಸುತ್ತಲೂ ಸ್ವಚ್ಚತಾ ಕಾರ್ಯವನ್ನು ಮಾಡಲಾಯಿತು.ಈ ಸಂಧರ್ಭದಲ್ಲಿ ಶಾಲಾ ಸಂಚಾಲಕ ಶೇಖ್ ರಹ್ಮತ್ತುಲ್ಲಾ ಹಾಗೂ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
p>