ಧರ್ಮಸ್ಥಳ ಶ್ರೀ ಮಂ.ಅ.ಪ್ರೌಢಶಾಲೆಯಲ್ಲಿ ಕನಕ ಜಯಂತಿ

0

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನ.30 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇದರ ಸಹಾಯಗದಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ ನಡೆಯಿತು.

ಉಜಿರೆ ಶ್ರೀ ಧ.ಮಂ.ತಾಂತ್ರಿಕ ಮಹಾವಿದ್ಯಾಲಯದ ಗ್ರಂಥಪಾಲಕಿ ಡಾ| ರಜತ ಪಿ.ಶೆಟ್ಟಿ ಕಾರ್ಯಕ್ರಮವನ್ನು ದೀಪ ಪ್ರಜ್ವಲನದೊಂದಿಗೆ ಉದ್ಘಾಟಿಸಿ, ನಮ್ಮ ಭಾವನೆಗಳನ್ನು ನೈಜವಾಗಿ ಅಭಿವ್ಯಕ್ತಗೊಳಿಸಲು ನಮ್ಮ ಮಾತೃಭಾಷೆಯಿಂದ ಮಾತ್ರ ಸಾಧ್ಯ ಎನ್ನುತ್ತಾ ವಿದ್ಯಾರ್ಥಿಗಳು ಬಾಲ್ಯದಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಆಶಿಸಿದರು.

ದಿಕ್ಸೂಚಿ ಭಾಷಣವನ್ನು ಮಾಡಿದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮೂಡುಬಿದ್ರೆಯ ಕನ್ನಡ ಉಪನ್ಯಾಸಕ ಡಾ| ವಾದಿರಾಜ ಕಲ್ಲೂರಾಯ ಕನ್ನಡ ಭಾಷೆಯು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು ಪ್ರತಿಯೊಂದು ಪದಗಳ ಉಚ್ಚಾರವು ವೈಜ್ಞಾನಿಕತೆಯ ನೆಲಗಟ್ಟಿನಿಂದ ಕೂಡಿದೆ ಎಂದರು.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂಪಿ ಶ್ರೀನಾಥ್, ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಅಧ್ಯಕ್ಷತೆಯನ್ನು ವಹಿಸಿಕೊಂಡ ಮುಖ್ಯೋಪಾಧ್ಯಾಯ ಪದ್ಮರಾಜು ಎನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಗೀತ ಶಿಕ್ಷಕಿಯಾದ ಶ್ರೀದೇವಿ ಕಾರ್ಯಕ್ರಮವನ್ನು ಸಂಘಟಿಸಿದ್ದರು.ನಿನಾದ ಕ್ಲಾಸಿಕಲ್ಸ್ ಮುಂಡ್ರುಪಾಡಿ ಧರ್ಮಸ್ಥಳ ಇದರ ವತಿಯಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು.ಶಿಕ್ಷಕ ಜಯ ರಾಮಮಯ್ಯ ಸ್ವಾಗತಿಸಿ, ಶಿಕ್ಷಕಿ ಭವ್ಯ ಹೆಗಡೆ ಅತಿಥಿಗಳನ್ನು ಪರಿಚಯಿಸಿದರು.ಶಿಕ್ಷಕ ಯುವರಾಜ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ತ್ರಿವೇಣಿ ವಂದಿಸಿದರು.

p>

LEAVE A REPLY

Please enter your comment!
Please enter your name here