ಧರ್ಮಸ್ಥಳದಲ್ಲಿ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ, ವ್ಯಸನ ಮುಕ್ತರ ಕುಟುಂಬೋತ್ಸವ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಇದರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನ ಮುಕ್ತರ ಹಾಗೂ ವೇದಿಕೆಯ ಯಶಸ್ಸಿಗಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಶ್ರಮಿಸುತ್ತಿರುವ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನಮುಕ್ತರ ಕುಟುಂಬೋತ್ಸವ ಡಿ.7ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರಗಿತು.

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಡಾ.ಹೇಮಾವತಿ ವೀ.ಹೆಗ್ಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಲ್ಬುರ್ಗಿಯ ಅಫ್ಜಲಪುರ ಶ್ರೀ ಮಳೇಂದ್ರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ.ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಗುಳಿಗೆಕೊಪ್ಪ ಒಪ್ಪಂತೇಶ್ವರ ಮಹಾ ಸ್ವಾಮಿ ಆಶೀರ್ವಚನ ನೀಡಿದರು.

ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್ ಜಾಗೃತಿ ಅಣ್ಣ, ಮಿತ್ರ ಪ್ರಶಸ್ತಿ ಪ್ರದಾನ ನೆರವೇರಿಸಿದರು.

ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ನ ಟ್ರಸ್ಟಿ ಶ್ರದ್ಧಾ ಅಮಿತ್ ಸಾಧಕರಿಗೆ ಗೌರವ, ಟ್ರಸ್ಟಿ ವಿ.ರಾಮಸ್ವಾಮಿ ಗುರುತಿನ ಚೀಟಿ, ನಿಕಟ ಪೂರ್ವ ಅಧ್ಯಕ್ಷ ಸತೀಶ್ ಹೊನ್ನವಳ್ಳಿ ಪ್ರಮಾಣ ಪತ್ರ ವಿತರಿಸಿದರರು.

ಟ್ರಸ್ಟಿ ಗಳಾದ ಡಾ.ಪಿ.ವಿ.ಭಂಡಾರಿ, ಡಾ.ಶ್ರೀನಿವಾಸ್ ಭಟ್, ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಮೂ.ಕೊರವಿ ಉಪಸ್ಥಿತರಿದ್ದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯಿಸ್ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಯೋಜನಾಧಿಕಾರಿ ಮೋಹನ್ ಕೆ. ನಿರೂಪಿಸಿದರು.ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರುಗಳು ಯೋಜನಾಧಿಕಾರಿಗಳು, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸಿಬ್ಬಂದಿಗಳು, ಕ್ಷೇತ್ರದ ವಿವಿಧ ವಿಭಾಗದ ಮುಖ್ಯಸ್ಥರು, ನವಜೀವನ ಸಮಿತಿ ಸದಸ್ಯರು ಮತ್ತು ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

ನವಜೀವನ ಸದಸ್ಯ ಕುಶಾಲಪ್ಪರವರ ಅವಳಿ ಸುಪುತ್ರಿಯರದ ನಿಸರ್ಗ, ವಿಸ್ಮಯ ಪ್ರಾರ್ಥಿಸಿದರು. ಚಂದನ್ ಬನ್ನೂರು ಮೈಸೂರು ಮತ್ತು ಶೈಲ ಜಗದೀಶ್ ಅನಿಸಿಕೆ ವ್ಯಕ್ತಪಡಿಸಿದರು.

p>

LEAVE A REPLY

Please enter your comment!
Please enter your name here