ಬೆಳ್ತಂಗಡಿ: ವಿದ್ಯಾರ್ಥಿಗಳು ಸೃಜನಶೀಲರಾಗುವಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲ/ಉಮೇಶ್ ಶೆಟ್ಟಿ MJF ಹೇಳಿದರು.
ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ ಪ್ರಶಂಸಾ ಇದರಲ್ಲಿ ಮುಖ್ಯ ಅತಿಥಿಯಾಗಿ ಮಾತಾಡುತ್ತಾ, ಜೀವನದಲ್ಲಿ ಬರುವ ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಪ್ರತಿಭಾನ್ವಿತರಾಗಬೇಕು. ಯಾವುದೇ ವ್ಯಸನಗಳಿಗೆ ಬಲಿಯಾಗದೆ, ಹೆತ್ತವರೊಂದಿಗೆ ಅನೋನ್ಯವಾಗಿದ್ದು ಸಮಾಜಮುಖಿಗಳಾಗಬೇಕು.
ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಗಣೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಶ್ರೀ ರಾಮ ಶಾಲೆ ಉಪ್ಪಿನಂಗಡಿ ಇದರ ಅಧ್ಯಕ್ಷ ಸುನಿಲ್ ಅನಾವು, ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಕ್ರೀಡಾ ಸಂಯೋಜಕ ನಂದಕುಮಾರ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಸಾಂಸ್ಕೃತಿಕ ಸಂಘದ ಸಂಯೋಜಕರಾದ ಮಹಾಬಲ ಗೌಡ ಮತ್ತು ದೀಕ್ಷಾ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರ ವಿವರ ನೀಡಿದರು. ಕ್ರೀಡಾ ಸಹ ಸಂಯೋಜಕ ವಿನೀಶ್ ಕ್ರೀಡಾ ಸ್ಪರ್ಧೆಗಳ ವಿಜೇತರ ವಿವರ ನೀಡಿದರು. ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಧನ್ಯವಾದ ಸಲ್ಲಿಸಿದರು.ಉಪನ್ಯಾಸಕಿ ರಮ್ಯಾ ಜೋಶಿ ಕಾರ್ಯಕ್ರಮ ನಿರೂಪಿಸಿದರು.