ಬೆಳ್ತಂಗಡಿ ಮೂಲದ ಹಿರಿಯ ನಟಿ ಲೀಲಾವತಿ ವಿಧಿವಶ

0

ಬೆಳ್ತಂಗಡಿ: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಲೀಲಾವತಿ (85) ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಕೆಲವು ಸಮಯಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತೀರಾ ಹದಗೆಟ್ಟಿದ್ದು, ಚಿತ್ರರಂಗದ ಹಲವು ನಟರು ಆಗಮಿಸಿ ಆರೋಗ್ಯ ವಿಚಾರಿಸಿದ್ದರು.

1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಜನಿಸಿದ್ದ ಲೀಲಾವತಿ ಅವರು ಕನ್ನಡ, ತೆಲುವು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿ, ರಾಜ್ಯದ ಮನೆಮಾತಾಗಿದ್ದರು.

2000ರಲ್ಲಿ ಡಾ. ರಾಜ್ ಕುಮಾರ್‌ ಜೀವಮಾನ ಸಾಧನೆ ಪ್ರಶಸ್ತಿ ಪಡೆದುಕೊಂಡರು.2008ರಲ್ಲಿ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಫಿಲ್ಡ್ ಫೇರ್ ಅವಾರ್ಡ್ಸ್ ಅನ್ನು ತನ್ನ ಮುಡಿಗೇರಿಸಿಕೊಂಡಿದ್ದರು.ಸೋಲದೇವನ ಹಳ್ಳಿಯಲ್ಲಿ ಸ್ವಂತ ಖರ್ಚಿನಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಿಸಿದ್ದರು. ಇದರೊಂದಿಗೆ ಪಶು ಆಸ್ಪತ್ರೆ ಸೇರಿದಂತೆ ಹಲವು ಸಾಮಾಜಿಕ ಕೆಲಸಗಳಿಂದಲೂ ಗುರುತಿಸಿಕೊಂಡಿದ್ದ ನಟಿ ಲೀಲಾವತಿ ಅವರು ಪುತ್ರ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ.

p>

LEAVE A REPLY

Please enter your comment!
Please enter your name here