



ಕಾರ್ಯತಡ್ಕ: ಕುಂಬಾರರ ಗುಡಿ ಕೈಗಾರಿಕಾ ಸಂಘ ಪುತ್ತೂರು ಪ್ರಾಯೋಜಕತ್ವದಲ್ಲಿ ಒಂದು ತಿಂಗಳ ವಿನ್ಯಾಸ ಅಭಿವೃದ್ಧಿ ಕಾರ್ಯಾಗಾರಕ್ಕೆ ಕಾರ್ಯತಡ್ಕ ಕುಂಬಾರರ ಸೇವಾ ಸಂಘದಲ್ಲಿ ಡಿ.8ರಂದು ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ನೆರವೇರಿಸಿದರು.



ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಉಪಾಧ್ಯಕ್ಷ ದಾಮೋದರ ವಿ. ಇವರು ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ನಿರ್ದೇಶಕ ಗಣೇಶ್ ಕುಲಾಲ್, ಪದ್ಮ ಕುಮಾರ್ ಮತ್ತು ಕರಕುಶಲ ಅಭಿವೃದ್ಧಿ ನಿಗಮದ ಪ್ರೊಮೋಷನ್ ಆಫೀಸರ್ ಹಲ್ತಾಪ್ ಹಸನ್ ರವರು ತರಬೇತಿಯ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡಿದರು.
ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಎಸ್.ಮೂಲ್ಯ ಕಾರ್ಯಕ್ರಮ ನಿರೂಪಿಸಿದರು.








