ಬೆಳ್ತಂಗಡಿ: ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವ ಶಿಕ್ಷಕರಿಗೆ ಶಿಕ್ಷಣ ಕ್ಷೇತ್ರದಲ್ಲಿ ಮುಕ್ತವಾದ ಸ್ವಾತಂತ್ರ್ಯ ನೀಡಬೇಕು ಶಿಕ್ಷಣದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಪೋಷಕರು ಶಿಕ್ಷಕರ ಸಹಕಾರಕ್ಕೆ ಮುಂದಾಗಬೇಕು.ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಮಾತನ್ನು ಕೇಳದಿದ್ದರೆ ಭವಿಷ್ಯದಲ್ಲಿ ಸಮಾಜದಲ್ಲಿ ಕೆಟ್ಟ ಮಾತುಗಳನ್ನು ಕೇಳುವ ಸ್ಥಿತಿ ಬರಬಹುದು. ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯು ಮಕ್ಕಳ ಭವಿಷ್ಯ ರೂಪಿಸುವಲ್ಲಿ ನಿರಂತರವಾಗಿ ದೊಡ್ಡ ಕೊಡುಗೆಯನ್ನು ನೀಡುತ್ತಿದೆ ಎಂದು ಪುಂಜಾಲಕಟ್ಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಕೆ ಶರತ್ ಕುಮಾರ್ ಹೇಳಿದರು.
ಅವರು ಡಿ.16ರಂದು ಬೆಳ್ತಂಗಡಿ ಹಳೇಕೋಟೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿ ವಿದ್ಯಾರ್ಥಿಗಳು ಸಕ್ಷಣ ಪಡೆಯುವುದರ ಜೊತೆಗೆ ಸಮಾಜದ ನೋವು-ನಲಿವುಗಳನ್ನು ಅರಿತುಕೊಳ್ಳಬೇಕು. ದೇಶದ ಸತ್ಪ್ರಜೆಗಳಾಗುವ ಮೂಲಕ ತಾನು ಕಲಿತ ಶಾಲೆ, ಊರಿಗೆ, ತಂದೆ-ತಾಯಿಗೆ ಕೀರ್ತಿಯನ್ನು ತರಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ಪದ್ಮ ಗೌಡ ಅಧ್ಯಕ್ಷತೆ ವಹಿಸಿದ್ದರು.
ವಾಣಿ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ, ಶಿಕ್ಷಣ ಸಂಸ್ಥೆಯ ಸಂಚಾಲಕ ಪ್ರಸಾದ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವರಾಮ್ ಹೆಗ್ಡೆ, ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ, ಶಾಲಾ ನಾಯಕಿ ನವಮಿ ಎಮ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಹಳೇ ವಿದ್ಯಾರ್ಥಿಗಳಾದ ಡಾ. ರಶ್ಮಿ ಆರ್. ಜೈನ್, ಡಾ. ಅನುದೀಕ್ಷಾ ಎಸ್.ಆರ್, ನಿರೀಕ್ಷಾ ಎನ್, ಸಾಯಿಶ್ ಎಮ್. ವಿ, ಗ್ರೀಷ್ಮಾ ವಿ, ಎಮ್ ಇವರನ್ನು ಗೌರವಿಸಲಾಯಿತು.
ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀ ನಾರಾಯಣ ಕೆ ಸ್ವಾಗತಿಸಿದರು. ಶಿಕ್ಷಕಿ ಪ್ರೀತಿ ವರದಿ ವಾಚಿಸಿದರು. ಶಿಕ್ಷಕಿ ಶಾಂತಿ ಮೆನೆಜಸ್, ಮೋಹನಾಂಗಿ, ಗೀತಾ ಕಾರ್ಯಕ್ರಮ ನಿರೂಪಿಸಿದರು.