ಧರ್ಮಸ್ಥಳ: ಮಿನಿ ವಿಮಾನ ನಿಲ್ದಾಣಕ್ಕೆ ಅಧಿಕಾರಿಗಳಿಂದ ಸ್ಥಳ ಗುರುತಿಸುವ ಕಾರ್ಯ

0

ಧರ್ಮಸ್ಥಳ: ಧರ್ಮಸ್ಥಳ ಮಿನಿ ವಿಮಾನ ನಿಲ್ದಾಣಕ್ಕೆ ಜಾಗ ಗುರುತಿಸುವ ಕಾರ್ಯಕ್ಕಾಗಿ ಸರ್ವೆ ಇಲಾಖೆಯ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಡಿ.21ರಂದು ಧರ್ಮಸ್ಥಳ ಕನ್ಯಾಡಿ ಹಾಗೂ ಕಲ್ಮಂಜ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಲ್ಮಂಜ ಗ್ರಾಮದ 153/1 ಸರ್ವೆ ನಂಬರ್ ನಲ್ಲಿ ಹಾಗೂ ಧರ್ಮಸ್ಥಳ ಗ್ರಾಮದ 57ಸರ್ವೆ ನಂಬರಿನಲ್ಲಿ ಒಟ್ಟು 157.93 ಎಕ್ರೆ ಜಮೀನನ್ನು ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ.ಸದ್ರಿ ಜಮೀನಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಮಿನಿ ವಿಮಾನ ನಿಲ್ದಾಣಕ್ಕೆಂದು ಗುರುತಿಸಲಾಗಿರುವ ಜಾಗ ಏರು ತಗ್ಗುಗಳಿಂದ ಕೂಡಿದ್ದಾಗಿರುವುದು ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡು ಬಂದಿದ್ದು ಇದು ಬಹುತೇಕ ಅರಣ್ಯ ಇಲಾಖೆಯ ವಶದಲ್ಲಿರುವ ಅಕೇಶಿಯಾ ಹಾಗೂ ಇತರ ನೆಡುತೋಪುಗಳಾಗಿವೆ.

ಸರ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಕಂದಾಯ ಇಲಾಖೆಯ ಅಧಿಕಾರಿಗಳು, ಅರಣ್ಯ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಶೀಲನೆ ನಡೆಸಿದರು.

ಮಿನಿವಿಮಾನ ನಿಲ್ದಾಣದ ಸ್ಥಳವನ್ನು ಅಂತಿಮಗೊಳಿಸುವ ಬಗ್ಗೆ ಮಂಗಳೂರಿನಲ್ಲಿ ಮುಂದಿನ ಸಭೆಗಳನ್ನು ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

p>

LEAVE A REPLY

Please enter your comment!
Please enter your name here