ಬೆಳ್ತಂಗಡಿ: ರಾಜಕೇಸರಿ ಸಂಘಟನೆ ಸಮಾಜದ ಸಾವಿರಾರು ಜನರಿಗೆ ಜಾತಿ ಭೇದವಿಲ್ಲದೆ ಸಹಕಾರ ನೀಡುತ್ತಿದೆ. ಆರೋಗ್ಯ ನೆರವಿಗಾಗಿ ವಿವಿಧ ಇಲಾಖೆಗಳನ್ನು ಒಟ್ಟುಗೂಡಿಸಿ ನಡೆಯುತ್ತಿರುವ ಈ ಕ್ರೀಡಾಕೂಟ ಶ್ಲಾಘನೀಯವಾದುದು.ಆಟಗಾರರು ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು’ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಹೇಳಿದರು.
ಅವರು ಡಿ.24 ರಂದು ಅಖಿಲ ಕರ್ನಾಟಕ ರಾಜಕೇಶರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ರಾಜಕೇಶರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಒಂದು ಬಡ ಕುಟುಂಬದ ವೈದ್ಯಕೀಯ ಶಸ್ತ್ರ ಚಿಕಿತ್ಸೆಗಾಗಿ 543 ನೇ ಸೇವಾ ಯೋಜನೆಯ ಪ್ರಯುಕ್ತ ಬೆಳ್ತಂಗಡಿ ತಾಲ್ಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಿ ಮಾತನಾಡಿದರು.
ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಉದ್ಘಾಟಿಸಿ ಶುಭ ಹಾರೈಸಿದರು.
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತನಾಡಿ, ಮುದುಡಿ ಕುಳಿತ ದೇಹಕ್ಕೆ ವ್ಯಾಯಾಮ ಸಿಗುವ ಹಾಗೆ ಸಂಘಟನೆಯವರು ಮಾಡಿದ್ದಾರೆ.ನಮ್ಮ ಸಂಪಾದನೆಯ ಒಂದು ಭಾಗ ಸಮಾಜಕ್ಕೆ ನೀಡಿ ಸುಸ್ಥಿರ ಸಮಾಜ ನಿರ್ಮಿಸುವಲ್ಲಿ ರಾಜ ಕೇಸರಿ ಸಂಘಟನೆ ಮಾಡುತ್ತಿರುವ ಕಾರ್ಯ ದೇವರು ಮೆಚ್ಚುವ ಕಾರ್ಯವಾಗಿದೆ ಎಂದರು.
ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ವಿಭಾಗದ ವ್ಯವಸ್ಥಾಪಕ ಉದಯ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಬೆಳ್ತಂಗಡಿ ಗೃಹ ರಕ್ಷಕ ದಳದ ಅಧ್ಯಕ್ಷ ಜಯಾನಂದ್, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ, ಅಗ್ನಿ ಶಾಮಕ ದಳದ ಉಸ್ಮಾನ್ ಇದ್ದರು.
ರಾಜಕೇಸರಿ ಸಂಘಟನೆಯ ಅಧ್ಯಕ್ಷ ಸಂದೀಪ್ ಅಧ್ಯಕ್ಷತೆ ವಹಿಸಿದ್ದರು.ಸಂಘಟನೆಯ ವಿಜಯ್ ಸಿಕ್ವೇರಾ ನಿರೂಪಿಸಿ ವಂದಿಸಿದರು.