ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ- ಉಜಿರೆ ಗ್ರಾ.ಪಂ ಗೆ ಡಾ.ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ

0

ಬೆಳ್ತಂಗಡಿ: ಕರ್ನಾಟಕ ಪಂಚಾಯತ್ ರಾಜ್ ಪರಿಷತ್, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಸಂಪನ್ಮೂಲ ವ್ಯಕ್ತಿಗಳ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಿ.25ರಂದು ಡಾ|| ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ, ಗುಂಡ್ಲುಪೇಟೆ, ಚಾಮರಾಜನಗರ ಇಲ್ಲಿ ಅಬ್ದುಲ್ ನಜೀರ್ ಸಾಬ್ ಜನ್ಮ ದಿನದ ಅಂಗವಾಗಿ ಜರುಗಿದ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ ಮತ್ತು ಡಾ.ಚಿಕ್ಕಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

ಕರ್ನಾಟಕ ರಾಜ್ಯ 5ನೇ ಹಣಕಾಸು ಆಯೋಗದ ರಾಜ್ಯಾಧ್ಯಕ್ಷರು ಸಿ.ನಾರಾಯಣ ಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಂಡ್ಲುಪೇಟೆ ತಾಲೂಕಿನ ಶಾಸಕ
ಗಣೇಶ್ ಪ್ರಸಾದ್ ಅವರು ವಹಿಸಿದರು.

ಅತ್ಯುತ್ತಮ ಗ್ರಾಮ ಪಂಚಾಯತ್ ವಿಭಾಗದಲ್ಲಿ ಬೆಳ್ತಂಗಡಿಯ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ದೊರೆತಿದ್ದು, ಪ್ರಮೋದ್ ಹೆಗಡೆ, ರಾಜ್ಯ ವಿಕೇಂದ್ರೀಕೃತ ಯೋಜನೆ ಇದರ ರಾಜ್ಯ ಉಪಾಧ್ಯಕ್ಷರು ಪ್ರಶಸ್ತಿ ಪ್ರದಾನವನ್ನು ನೆರವೇರಿಸಿದರು.ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಅವರು ಪ್ರಶಸ್ತಿಯನ್ನು ಮತ್ತು ಗೌರವವನ್ನು ಸ್ವೀಕರಿಸಿದರು. ಮಾಜಿ ಸಚಿವ ಜೆ ಸಿ ಮಾಧು ಸ್ವಾಮಿ ಅವರು ಪಂಚಾಯತ್ ರಾಜ್ ದಾರಿ ದೀಪ ನಜೀರ್ ಸಾಬ್ ಪುಸ್ತಕ ಬಿಡುಗಡೆ ಮಾಡಿದರು.

ಕಾರ್ಯದರ್ಶಿ ಶ್ರವಣ್ ಕುಮಾರ್, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here