ಬಳಂಜ: ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ-ಧಾರ್ಮಿಕ ಸಭೆ

0

ಬಳಂಜ: ಶ್ರೀ ನಾಗಬ್ರಹ್ಮ ಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿನ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಡಿ.26 ರಂದು ವಿಜೃಂಭಣೆಯಿಂದ ನೆರವೇರಿತು.

ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕಾಲೇಜಿನ ಉಪನ್ಯಾಸಕರಾದ ಕೇಶವ ಬಂಗೇರರವರು ಪ್ರತಿಯೊಬ್ಬ ವ್ಯಕ್ತಿಯೂ ಜಾತಿ ವ್ಯವಸ್ಥೆಯನ್ನು ಬದಿಗಿಟ್ಟು ದೇವರ ಮೇಲೆ ಭಕ್ತಿಯಿಂದ ದೇವಸ್ಥಾನದ ಸೇವೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಶ್ರದ್ದಾ ಕೇಂದ್ರಗಳ ಅಭಿವೃದ್ಧಿ ಆಗುತ್ತದೆ ಎಂದು ನುಡಿದರು.ನಾಲ್ಕೂರು ಕಂಚಿನಡ್ಕ ಶ್ರೀ ಮ್ಯೂಜಿಲ್ನಯ ಬ್ರಹ್ಮಸ್ಥಾನದ ಅಧ್ಯಕ್ಷ ವಿನಯ ಶೆಟ್ಟಿಯವರು ಅಧ್ಯಕ್ಷತೆಯನ್ನು ವಹಿಸಿ ಶುಭವನ್ನು ಹಾರೈಸಿದರು.

ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ಸಂಜೀವ ಮಡಿವಾಳ ಕಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಎಲ್ಲರನ್ನೂ ಸ್ವಾಗತಿಸಿದರು.ಸದಾನಂದ ಸಾಲಿಯಾನ್ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸಂಚಾಲಕರಾದ ಹರೀಶ್.ವೈ ಚಂದ್ರಮ ಧನ್ಯವಾದ ಸಲ್ಲಿಸಿದರು.

ಕ್ಷೇತ್ರದ ತಂತ್ರಿಗಳಾದ ಬಾಲಕೃಷ್ಣ ಪಾಂಗಣ್ಣಾಯರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಬೆಳಿಗ್ಗೆ ಆಶ್ಲೇಷ ಬಲಿ, ಅನ್ನ ಸಂತರ್ಪಣೆ ಹಾಗೂ ಸಂಜೆ ಮಹಾ ರಂಗಪೂಜೆ, ದೇವರ ಉತ್ಸವ, ಸ್ವಾತಿ ಮ್ಯೂಸಿಕಲ್ ಕಾರ್ಯನ ತಂಡದವರಿಂದ ಭಜನೆ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಕುಣಿತ ಭಜನೆ, ಪಿಲಿಚಾಮುಂಡಿ ದೈವದ ನೇಮೋತ್ಸವ ಹಾಗೂ ಮದ್ದಡ್ಕ ತಂಡವರಿಂದ ನಾಟಕ ನಡೆಯಿತು.

p>

LEAVE A REPLY

Please enter your comment!
Please enter your name here