ಬೆಳ್ತಂಗಡಿ: ವೇಣೂರಿನಲ್ಲಿ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಜ.3ರಂದು ರಾಜಭವನದಲ್ಲಿ ಭೇಟಿ ಮಾಡಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ.ಪದ್ಮಪ್ರಸಾದ್ ಅಜಿಲರು, ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಉಪಸ್ಥಿತರಿದ್ದರು.
p>