ಉಜಿರೆ: ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಮಾಧುರ್ಯಂ- 24 ಸಾಂಸ್ಕೃತಿಕ ಸಂಭ್ರಮವು ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಧ.ಮಂ ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ.ವಿಶ್ವನಾಥ್ ಪಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಮೌಲ್ಯ ಮತ್ತು ಉತ್ತಮ ಗುಣಗಳನ್ನು ಅಳವಡಿಸಿಕೊಂಡು, ಸಾಧನೆಗಳನ್ನು ಮಾಡಬೇಕು.ಇಂತಹ ಸಾಧನೆಗೆ ಪರಿಶ್ರಮ, ಛಲ, ಆತ್ಮವಿಶ್ವಾಸ, ಕೌಶಲ್ಯಗಳು ಅಗತ್ಯವೆಂಬ ಅಭಿಪ್ರಾಯ ವ್ಯಕ್ತಪಡಿಸಿದರು.ಕಾರ್ಯಕ್ರಮದ ಅಧ್ಯಕ್ಷ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ ಅವರು ಮಾತನಾಡಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ ಸಾಧನೆ ಮಾಡದೇ ಪಠ್ಯೇತರ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕೆಂದು ಕರೆ ನೀಡಿದರು.
ವೇದಿಕೆಯಲ್ಲಿ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಸೋಮಶೇಖರ ಶೆಟ್ಟಿ ಹಾಗೂ ಯುವರಾಜ ಪೂವಣಿ ಮತ್ತು ಕಾಲೇಜಿನ ಉಪ ಪ್ರಾಂಶುಪಾಲ ಡಾ.ರಾಜೇಶ ಬಿ ಉಪಸ್ಥಿತರಿದ್ದರು. ಸಾಂಸ್ಕೃತಿಕ ಹಾಗೂ ಕ್ರೀಡೆ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ನೀಡಲಾಯಿತು.ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಮಹಾವೀರ್ ಜೈನ್ ಅತಿಥಿಗಳನ್ನು ಸ್ವಾಗತಿಸಿದರು.
ಕಾಲೇಜಿನ ರಸಾಯನ ಶಾಸ್ತ್ರದ ಮುಖ್ಯಸ್ಥ ರಾಜೇಶ್ ಕೆ. ವಂದನಾರ್ಪಣೆ ಸಲ್ಲಿಸಿದರು.ವಿದ್ಯಾರ್ಥಿ ರಚನಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.