ಬೆಳ್ತಂಗಡಿ: ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕ ಆಶ್ರಯದಲ್ಲಿ ವಾಣಿ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಿಧನ ಹೊಂದಿದ ಪ್ರೊ.ಅಮೃತ ಸೋಮೇಶ್ವರರಿಗೆ ಶೃದ್ಧಾಂಜಲಿಯನ್ನು ಅರ್ಪಿಸಲಾಯಿತು.ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ.ದಿವ ಕೊಕ್ಕಡ ನುಡಿನಮನಗಳನ್ನು ಸಲ್ಲಿಸುತ್ತಾ, ಅಮೃತ ಸೋಮೇಶ್ವರರು ಮಲೆಯಾಲಂ ಮಾತೃ ಭಾಷೆಯವರಾದರೂ ಕನ್ನಡ ಮತ್ತು ತುಳು ಭಾಷೆ ಹಾಗೂ ಸಾಹಿತ್ಯದಲ್ಲಿ ಅಪಾರವಾದ ಜ್ಞಾನವನ್ನು ಹೊಂದಿದವರಾಗಿದ್ದಾರೆ.
ಅವರು ಕಡಲಿನಷ್ಟು ಆಳಕ್ಕೆ ಮತ್ತು ಬೆಟ್ಟದಷ್ಟು ಎತ್ತರಕ್ಕೆ ತಲುಪಿದವರಾಗಿದ್ದಾರೆ. ಕುವೆಂಪು, ಶಿವರಾಮಕಾರಂತರ ನಂತರದಲ್ಲಿ ಆ ಸ್ಥಾನವನ್ನು ತುಂಬಿದವರಾಗಿದ್ದು ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಕೃಷಿ ಮಾಡಿ ಜನಮಾನಸದಲ್ಲಿ ಉಳಿದವರಾಗಿದ್ದಾರೆ ಎಂದರು.
ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ನ ಅಧ್ಯಕ್ಷರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲರಾದ ಪ್ರೊ.ಕೃಷ್ಣಪ್ಪ ಪೂಜಾರಿ, ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಸುವರ್ಣ, ವಾಣಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಜಯಾನಂದ ಗೌಡ, ಕನ್ನಡ ಸಾಹಿತ್ಯ ಪರಿಷತ್ತ್ನ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು, ಪ್ರಮೀಳಾ, ಉಪನ್ಯಾಸಕಿ ಮೀನಾಕ್ಷಿ ಉಪಸ್ಥಿತರಿದ್ದರು.ಉಪನ್ಯಾಸಕ ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು.ಉಪನ್ಯಾಸಕ ಮೋಹನ ಗೌಡ ವಂದಿಸಿದರು.