ಚಾರ್ಮಾಡಿ: ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರೆತಿದೆ. ಚಾರ್ಮಾಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ.ಬಿಡುಗಡೆ ಮಾಡಲು ಅನುಮತಿ ನೀಡಲಾಗಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಇಪಿಸಿ ಮಾದರಿಯಲ್ಲಿ 10.8 ಕಿ.ಮೀ ರಸ್ತೆಯ ವಿಸ್ತರಣೆ ಮಾಡಲಾಗುತ್ತದೆ. ಈ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ. ಚಾರ್ಮಾಡಿ ಘಾಟ್‌ನ ಗುಡ್ಡಗಾಡು ಪ್ರದೇಶದಲ್ಲಿ ಕೈಗೆತ್ತಿಕೊಳ್ಳುವ ಕಾಮಗಾರಿ ಸವಾಲಿನದ್ದಾಗಿದೆ.ಇದರೊಂದಿಗೆ ಸಂಚಾರ ವ್ಯವಸ್ಥೆ ಗಣನೀಯವಾಗಿ ಸುಧಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.
p>