


ಲಾಯಿಲ: ಇಲ್ಲಿಯ ಪಡ್ಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾ ಎಸ್ ಡಿ ಎಂ ಸಿ ನಾಮ ನಿರ್ದೇಶಕ ಹಾಗೂ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಶೇಖರ್ ಲಾಯಿಲ ಧ್ವಜಾರೋಹಣವನ್ನು ನೆರವೇರಿಸಿ, ಗಣರಾಜ್ಯೋತ್ಸವದ ಮಹತ್ವ ಮತ್ತು ಸಂವಿಧಾನದ ಬಗ್ಗೆ ಮಾಹಿತಿ ಕೊಟ್ಟರು.
ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸ್ವಾಗತಿಸಿ, ಶಿಕ್ಷಕ ಯೋಗೀಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಹಳೆ ವಿದ್ಯಾರ್ಥಿಗಳಾದ ಅಚ್ಯುತ ಗೌಡ, ಮ್ಯಾಕ್ಸಿಂ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೀತಾ, ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಊರವರು, ಹಾಗೂ ಪುಟಾಣಿಗಳು ಭಾಗವಹಿಸಿದ್ದರು.
ಕಾರ್ಯಕ್ರಮಕ್ಕೆ ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದ ಲಾಯಿಲ ಗ್ರಾಮದ ನ್ಯಾಯವಾದಿ ನೋಟರಿ ಪಬ್ಲಿಕ್ ಹಾಗೂ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಮಿತಿ (ಕೆಡಿಪಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ಸಂತೋಷ್ ಕುಮಾರ್ ನೀಡಿ ಸಹಕರಿಸಿದರು.