ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ ಅವರು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದುಕೊಂಡ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಬಳಿಕ ಮಾತನಾಡಿದ ಸಚಿವರು, ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ ಬಂಗೇರ ಅವರು ಎಐಸಿಸಿ ಸದಸ್ಯರಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಶೀಘ್ರ ಗುಣಮುಖರಾಗಲೆಂದು ಆಶಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಈಗಾಗಲೇ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದು ಯಾರೂ ಕೂಡ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ವಸಂತ ಬಂಗೇರರ ಆಪ್ತರೊಬ್ಬರು ಮಾಹಿತಿ ನೀಡಿದ್ದಾರೆ.
p>