ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಗಣರಾಜ್ಯೋತ್ಸವ

0

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಗಣರಾಜ್ಯೋತ್ಸವವು ಧ್ವಜಾರೋಹಣದಿಂದ ಪ್ರಾರಂಭಗೊಂಡಿತು.

ಮಮತಾ ಗುಜರಾನ್ ಅಡ್ಮಿನಿಸ್ಟ್ರೇಷನ್ ಆಫ್ ಎಂ ಏನ್ ಸಿ ಓ ಮುಂಬೈ ಇವರು ಧ್ವಜರೋಹಣ ನೆರವೇರಿಸಿ, ಇಂದಿನ ಮಕ್ಕಳೇ ಮುಂದಿನ ಜನಾಂಗ ಒಳ್ಳೆಯ ಸಂಸ್ಕಾರಯುತ ಶಿಕ್ಷಣವನ್ನು ಪಡೆಯುತ್ತಿದ್ದೀರಿ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ನಮ್ಮ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆಎಚ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವ ದಿನದ ಬಗ್ಗೆ ತಿಳಿಸಿದರು. ಬಿಸಿ ರೋಡ್ ನಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಮುಖ್ಯ ಕಾರ್ಯನಿರ್ವಾಧಿಕಾರಿಯಾದ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳಿಗೆ ಶುಭ ನುಡಿದರು. ಪ್ರೌಢಶಾಲಾ ವಿಭಾಗದ ಸಮಾಜ ಶಿಕ್ಷಕಿ ರೂಪಲತ ಈ ದಿನದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ದೀಕ್ಷ ಕುಲಾಲ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ರಾವ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಶಿಕ್ಷಕಿ ಭವಾನಿ ದಿವ್ಯ ಮತ್ತು ಶಿಕ್ಷಕಿ ಸಂಗೀತ ನಿರೂಪಿಸಿ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತ ಸ್ವಾಗತಿಸಿ , ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಧನ್ಯವಾದ ಅರ್ಪಿಸಿದರು.ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದು,ಸಿಹಿ ತಿಂಡಿಯನ್ನು ಹಂಚಲಾಯಿತು.

p>

LEAVE A REPLY

Please enter your comment!
Please enter your name here