ಬೆಳ್ತಂಗಡಿ: ಮಲವಂತಿಗೆ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಜೈನ್ ರವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ನಡೆಯಿತು.
ನೋಡೆಲ್ ಅಧಿಕಾರಿಯಾಗಿ ತಾಲೂಕು ಪಶುಸಂಗೋಪನೆ ವೈದ್ಯಾಧಿಕಾರಿ ಮಂಜನಾಯ್ಕ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.
ಕಂದಾಯ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆ, ಪಶುಸಂಗೋಪನೆ ಇಲಾಖೆ, ಮೆಸ್ಕಾಂ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಇಂಜಿನಿಯರಿಂಗ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರೋಹಿನಿ, ಗ್ರಾ.ಪ್ರಂ ಸದ್ಯಸರುಗಳಾದ ಅನಿತಾ, ಪವಿತ್ರಾ, ದಿನೇಶ್, ಅರುಣಾ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾ.ಪಂ ಪಿ.ಡಿ.ಓ.ರಶ್ಮಿ.ಬಿ ಸ್ವಾಗತಿಸಿದರು.ಕಾರ್ಯದರ್ಶಿ, ಸಿಬ್ಬಂದಿಗಳು ಸಹಕರಿಸಿದರು.
p>