


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮತ್ತು ಕುಟುಂಬ ಫೆ.5ರಂದು ಬೇಟಿ ನೀಡಿ ದೇವರ ದರ್ಶನ ಪಡೆದರು.


ನಂತರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಹಲವಾರು ವಿಚಾರದ ಬಗ್ಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಗೌಡ, ದಯಾನಂದ ಬೆಳಾಲು ಹಾಗೂ ಇತರರು ಜೊತೆಗಿದ್ದರು.
ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ,ದೇವಳದ ಮ್ಯಾನೇಜರ್ ಪಾರ್ಶ್ವನಾಥ ಜೈನ್ ಉಪಸ್ಥಿತರಿದ್ದರು.








