ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ- ಮಹಿಳಾ ಒಕ್ಕೂಟ ವಾರ್ಷಿಕ ಮಹಾಸಭೆ

0

ಅಳದಂಗಡಿ: ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯನ್ನು ಫೆ.5ರಂದು ಅಳದಂಗಡಿ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಈ ಸಭೆಯು ಒಕ್ಕೂಟದ ಕಾರ್ಯದರ್ಶಿಯಾದ ಜೈನಬ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಹಾಸಭೆಯು ಸಂಜೀವಿನಿ ಸದಸ್ಯರಾಗದ ಸವಿತಾ ರವರ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ಪಂಚಾಯತ್ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ದೀಪ ಬೆಳಗಿಸುವುದರ ಮೂಲಕ ಮಹಾಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಂದಂತಹ ಎಲ್ಲಾ ಗಣ್ಯರನ್ನು ಹೂಗುಚ್ಚ ನೀಡುವುದರ ಮೂಲಕ ಸ್ವಾಗತಿಸಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ ಮೇಡಂ ರವರು ಎನ್. ಆರ್. ಎಲ್. ಎಂ. ನ ಯೋಜನೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು.

ಒಕ್ಕೂಟದ ನೂತನ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಹಾಗೂ ಪದಾಧಿಕಾರಿಗಳ ಪದಗ್ರಹಣ ನಡೆಸಲಾಯಿತು.ಹಾಗೂ ಒಕ್ಕೂಟದ ಪದಾಧಿಕಾರಿಗಳನ್ನು ಗೌರವಿಸಲಾಯಿತು.ಪುಷ್ಪಗುಚ್ಛದೊಂದಿಗೆ ದಾಖಲಾತಿಗಳನ್ನು ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸಲಾಯಿತು.

ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯ ಪುಸ್ತಕ ಬರಹಗಾರರಾದ ಹರ್ಷಲಾರವರು ವರದಿ ಮಂಡನೆ ಮಾಡಿದರು, ಹಾಗೂ ಜಮಾ ಖರ್ಚಿನ ವರದಿ ಮಂಡಿಸಿದರು.ಒಕ್ಕೂಟದ ಮಹಾಸಭೆಯಲ್ಲಿ ಒಕ್ಕೂಟದ ಕಾರ್ಯದರ್ಶಿ, ಉಪಾಧ್ಯಕ್ಷರು, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ವಲಯ ಮೇಲ್ವಿಚಾರಕರು, ಗ್ರಾಮ ಪಂಚಾಯತ್ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು, ಕೃಷಿ ಸಖಿ ಸ್ವಚ್ಛವಾಹಿನಿ ಡ್ರೈವರ್, ಸಂಜೀವಿನಿ ಗುಂಪಿನ ಸದಸ್ಯರು ಹಾಜರಿದ್ದರು. ಸ್ಥಳೀಯ ಸಂಪನ್ಮೂಲ ವ್ಯಕ್ತಿ ಸುಜಾತ ವಂದಿಸಿದರು.

ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಅಳದಂಗಡಿ ಇದರ ವತಿಯಿಂದ ಲಿಂಗತ್ವಧಾರಿತ ದೌರ್ಜನ್ಯ ನಿವಾರಣೆ ಗೊಳಿಸುವ ಬಗ್ಗೆ ಘೋಷಣೆಯೊಂದಿಗೆ ಜಾಥಾವನ್ನು ನಡೆಸಲಾಯಿತು.

p>

LEAVE A REPLY

Please enter your comment!
Please enter your name here