ಉಜಿರೆ: ಫೆ.14ರಂದು ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಡಾ.ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ನಡೆಯುವ ಈ ಶಿಬಿರದಲ್ಲಿ ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ, ಮುಟ್ಟಿನ ಅಸ್ವಸ್ಥತೆಗಳು, ಮೂತ್ರನಾಳದ ಸೋಂಕು ತಪಾಸಣೆ, ಸ್ತ್ರನದ ತಪಾಸಣೆ, ಗರ್ಭಾಶಯದ ತಪಾಸಣೆ, ಮಹಿಳೆಯರ ಕ್ಯಾನ್ಸರ್ ಮುಂತಾದ ತಪಾಸಣೆಗಳನ್ನು ಉಚಿತವಾಗಿ ಮಾಡಲಾಗುವುದು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಸ್ವರ್ಣಲತಾ, ಡಾ. ಪ್ರಿಯಾಂಕ, ಡಾ. ಅನ್ವಿತಾ ಹಾಗೂ ಸಂತಾನೋತ್ಪತ್ತಿ ಔಷಧ ಕನ್ಸಲ್ಟೆಂಟ್ ಆಗಿರುವ ಡಾ. ಪ್ರಮೋದ ಲಕ್ಷ್ಮಣ್ ಈ ಶಿಬಿರದಲ್ಲಿ ಮಹಿಳೆಯರ ತಪಾಸಣೆ ನಡೆಸಲಿದ್ದಾರೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತ, ಸ್ಕ್ಯಾನಿಂಗ್ 50%, ಔಷಧದಲ್ಲಿ 10%, ಒಳರೋಗಿ ವಿಭಾಗದಲ್ಲಿ 10%, ರಕ್ತಪರೀಕ್ಷೆ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ.