ಕಾಶಿಪಟ್ಣ: ಸಂವಿಧಾನ ಜಾಗೃತಿ ಜಾಥಾ

0

ಕಾಶಿಪಟ್ಣ: ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಕಾಶಿಪಟ್ಣ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಆಗಮಿಸಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್.ಕೆ.ಕಾಶಿಪಟ್ಣ ಇವರು ಹೂ ಮಾಲೆ ಹಾಕುವ ಮುಖಾಂತರ ಜಾಥಾವನ್ನು ಸ್ವಾಗತಿಸಿದರು.ಚೆಂಡೆ, ಕೊಂಬು, ವಾದ್ಯಗಳ ಮುಖಾಂತರ ಮೆರೆವಣಿಗೆಯೊಂದಿಗೆ ಕಛೇರಿಗೆ ಜಾಥಾ ಆಗಮಿಸಿತು.ನಾಡಗೀತೆಯೊಂದಿಗೆ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಮಾಜಿ ತಾಲೂಕು ಪಂಚಾಯತ್ ಸದಸ್ಯರು ಚಂದು ಎಲ್, ರಮೇಶ್ ಆರ್-ಸಂಚಾಲಕರು DSS (A) ಬೆಳ್ತಂಗಡಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ಕೆ.ರಾಜು ಪೂಜಾರಿ, ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಪ್ರವೀಣ್ ಗಿಲ್ಬರ್ಟ್ ಪಿಂಟೋ ರವರು, ಹೊಸಂಗಡಿ ಇಂದಿರಾ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ, ಮುಂಡಾಜೆ ವಸತಿ ಶಾಲೆಯ ಪ್ರಾಂಶುಪಾಲರು, ಕಾಶಿಪಟ್ಣ ಪ್ರೌಢಶಾಲಾ ಅಧ್ಯಾಪಕರು, ಕೇಳದ ಪೇಟೆ ಶಾಲೆಯ ಅಧ್ಯಾಪಕರು, ನರೇಗಾ ತಾಲೂಕು ಐಇಸಿ ಸಂಯೋಜಕರಾದ ವಿನಿಷಾ, ತಾಲೂಕು ವಿವಿಧ ಸಂಘಟನೆಗಳ ಮುಖಂಡರು, ಎನ್ ಆರ್ ಎಲ್ ಎಂ ಸಂಘದ ಅಧ್ಯಕ್ಷರು, ಎಲ್ ಸಿ ಆರ್ ಪಿ, ಎಮ್ ಬಿ ಕೆ. ಸದಸ್ಯರು, ಗ್ರಾಮದ ಗಣ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕಾಶಿಪಟ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ಕೆ.ರಾಜು ಪೂಜಾರಿ ಇವರು ದೀಪ ಬೆಳಗಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸರಕಾರಿ ಪ್ರೌಢಶಾಲಾ ಅಧ್ಯಾಪಕರು ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು.ಸಂವಿಧಾನ ಕುರಿತಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರು ಬಹುಮಾನ ನೀಡಿ ಅಭಿನಂದಿಸಿದರು.ಮಂಗಳೂರಿನ ಕಲಾ ತಂಡದವರು ಜಾಗೃತಿ ಗೀತೆ ಮತ್ತು ನಾಟಕ ಪ್ರದರ್ಶಿಸಿದರು.ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು.ಈ ಕಾರ್ಯಕ್ರಮಕ್ಕೆ ಸರಕಾರಿ ಪ್ರೌಢಶಾಲಾ ಅಧ್ಯಾಪಕ ದೇವದಾಸ ಇವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು.ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

p>

LEAVE A REPLY

Please enter your comment!
Please enter your name here