


ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಗುರುವಾಯನಕೆರೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವೇಣೂರು, ಪ್ರಗತಿ ಬಂಧು, ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ವೇಣೂರು, ವಿಪತ್ತು ನಿರ್ವಾಹಣಾ ಘಟಕ ವೇಣೂರು ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು, ಶ್ರೀ ಮಹಾಲಿಂಗೇಶ್ವರ ಕೃಪಾಪೋಷಿತ ಭಜನಾ ಮಂಡಳಿ ವೇಣೂರು, ಯುವಕ ಮಂಡಲ ವೇಣೂರು ಇವರ ಸಹಕಾರದೊಂದಿಗೆ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 37ನೇ ವರ್ಷದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ ಫೆ.13 ರಂದು ಜರಗಿತು.
ಇದರ ಅಂಗವಾಗಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಸಾಮೂಹಿಕ ಸತ್ಯ ನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಧರ್ಣಪ್ಪ ಮುಲ್ಯ ವಹಿಸಿದ್ದರು.ವೇಣೂರು ವಿವೇಕಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ವಿಜಯರಾಜ ಅಧಿಕಾರಿ ಕಾರ್ಯಕ್ರಮ ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದ.ಕ.ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ವೇಣೂರು ಉದ್ಯಮಿ ಭಾಸ್ಕರ ಪೈ, ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ.ಎಸ್., ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಹಿರಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಸೀತಾ, ಕಮಲ, ಕೊರಗಪ್ಪ ಪೂಜಾರಿ, ಲಲಿತ, ದೂಜ ವೇಣೂರು ಇವರಿಗೆ ಸನ್ಮಾನ ಮತ್ತು ಮೇಸ್ತ್ರಿ ಅಶೋಕ ಇವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಶೀನ ದೇವಾಡಿಗ ವೇಣೂರು ಒಕ್ಕೂಟದ ನಿಕಟ ಪೂರ್ವ ಮತ್ತು ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.ಮೇಲ್ವಿಚಾರಕಿ ಶಾಲಿನಿ ಸ್ವಾಗತಿಸಿ, ಪೂಜಾ ಸಮಿತಿಯ ಕಾರ್ಯದರ್ಶಿ ಶೀಲಾ ವಂದಿಸಿದರು. ಸತೀಶ್ ಪೂಜಾರಿ ಉಜಿರ್ ದಡ್ಡ ಕರಿಮಣೆಲು ನಿರೂಪಿಸಿದರು.