ಮಚ್ಚಿನ: ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾವು ಫೆ.12ರಂದು ಮಚ್ಚಿನ ಗ್ರಾಮ ಪಂಚಾಯತ್ ನಿಂದ ಸಮುದಾಯ ಭವನದವರೆಗೆ ಕಾಲ್ನಡಿಗೆ ಮೆರವಣಿಗೆ ಜಾತ ನಡೆಯಿತು.
ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.ಮೊರಾರ್ಜಿ ದೇಸಾಯಿ ವಸತಿ ಶಾಲೆ ಇಲ್ಲಿಯ ಶಾಲಾ ಮಕ್ಕಳು ಮುಖ್ಯೋಪಾಧ್ಯಾಯರು, ಶಿಕ್ಷಕ ಬಳಗ, ಸದಸ್ಯರಾದ ಪ್ರಮೋದ್ ಕುಮಾರ್, ಡೀಕಮ್ಮ, ರಮ್ಯಶ್ರೀ, ತಾರಾ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
p>