ವೇಣೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ಫೆ.22ರಿಂದ ಮಾ.1ರ ವರೆಗೆ ನಡೆಯಲಿದ್ದು ಮೂರನೇ ದಿನ ಫೆ.24ರಂದು ಭರತೇಶ ಸಮುದಾಯ ಭವನದಲ್ಲಿ ಧಾರ್ಮಿಕ ಸಭೆ ನಡೆಯಿತು.
ಕಾರ್ಯಕ್ರಮ ಪರಮ ಪೂಜ್ಯ 108 ಶ್ರೀ ಅಮೋಘಕೀರ್ತಿ ಮತ್ತು ಪರಮ ಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ಮೂಡಬಿದ್ರೆ ಜೈನ್ ಮಠದ ಡಾ.ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಮಹಾ ಸ್ವಾಮೀಜಿ, ಹೊಂಬುಜ ಜೈನ ಮಠದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ, ಅರಿಕಾಮಾತಜೆಯವರ ಉಪಸ್ಥಿತಿಯಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಸ್ಥಾಪಕ ವಂಶಿಯ ಅರಸರು ಮತ್ತು ಸಮಿತಿಯ ಕಾರ್ಯಾಧ್ಯಕ್ಷ ತಿಮ್ಮಣ್ಣರಸ ಡಾ.ಪದ್ಮಪ್ರಸಾದ್ ಅಜಿಲ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸಮಿತಿಯ ಪ್ರಧಾನ ಸಂಚಾಲಕ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಖ್ಯಾತ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್, ಹೆಚ್.ಪಿ.ಸಿ.ಎಲ್ ನ ಜಿ.ಎಂ ನವೀನ್ ಕುಮಾರ್ ಎಂ. ಜಿ., ಬೆಳಗಾವಿಯ ಪೊಲೀಸ್ ವರಿಷ್ಟಧಿಕಾರಿ ಜೀನೇಂದ್ರ ಕಣಗಾವಿ, ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ಪಿ.ಪಿ.ಹೆಗ್ಡೆ ಭಾಗವಹಿಸಿದ್ದರು.
ಸುವರ್ಣ ನ್ಯೂಸ್ ಮುಖ್ಯ ಸಂಪಾದಕ ಅಜಿತ್ ಹನುಮಕ್ಕನವರ್ ವಿಶೇಷ ಉಪನ್ಯಾಸ ನೀಡಿದರು.ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್ ಕುಮಾರ್ ಇಂದ್ರ, ದಿನದ ಸೇವಾಕರ್ತರಾದ ಡಾ.ಶಾಂತಿಪ್ರಸಾದ್, ಸುನಿತ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 18 ನಿರೂಪಕಿ ನಮಿತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.
ಬೆಳಿಗ್ಗೆ ಹಾಗೂ ಮಧ್ಯಾಹ್ನ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.