ಮಚ್ಚಿನ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 9 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ಇವರ ಬೀಳ್ಕೊಡುಗೆ ಸಮಾರಂಭ ಫೆ.24ರಂದು ನಡೆಯಿತು.
ಮುಖ್ಯ ಅತಿಥಿಯಾಗಿ ಗ್ರಾಮ ಪಂಪಂಚಾಯತ್ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯ ದಿನೇಶ್, ಜಯಪ್ರಕಾಶ್ ಸಂಪಿಗೆತ್ತಾಯ, ಪೋಷಕರ ಸಮಿತಿಯ ಅಧ್ಯಕ್ಷೆ ಸುಮಲತಾ, ಮಾಜಿ ಅಧ್ಯಕ್ಷ ಪರಮೇಶ್ವರ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪ್ರಮೀಳಾ ಅಗ್ನೇಸ್ ಲೋಬೊ, ಪೋಷಕ ಸಮಿತಿಯ ಸದಸ್ಯ ಹನೀಪ್ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕರು ಹಾಗೂ ಮಕ್ಕಳು ತಮ್ಮ ಶಿಕ್ಷಕರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.ಶಾಲಾ ಪರವಾಗಿ ಶಿಕ್ಷಕರು, ಶಾಲಾ ಪೋಷಕರ ಸಮಿತಿ , ಚಾಲಕರ, ಬಿಲ್ಲವ ವೇದಿಕೆ ಬಳ್ಳಮಂಜ ಮತ್ತು ಅಡುಗೆ ಸಿಬ್ಬಂದಿಗಳ ವತಿಯಿಂದ ಸನ್ಮಾನಿಸಿ ಬಿಳ್ಕೊಡಲಾಯಿತು.
ಸನ್ಮಾನ ಸ್ವೀಕರಿಸಿದ ವಿಠಲ್ ಬಿ ಮಾತನಾಡಿ ಶಾಲೆಯ ಅಭಿವೃದ್ಧಿಗೆ ನನ್ನೊಂದಿಗೆ ಸಹಕರಿಸಿದ ಪೋಷಕರಿಗೂ ಹಾಗೂ ಊರವರಿಗೂ ಕೃತಜ್ಞತೆ ಸಲ್ಲಿಸಿದರು.
ಶಾಲಾ ಮಕ್ಕಳಿಗೆ ಬುದ್ಧಿ ಮಾತುಗಳನ್ನು ಹೇಳಿ ತಮ್ಮ ಮುಂದಿನ ವಿದ್ಯಾಭ್ಯಾಸವು ಈ ಶಾಲೆಯ ಹೆಸರು ಕೀರ್ತಿಯನ್ನು ತರುವಂತಾಗಲಿ ಎಂದು ಶುಭ ಹಾರೈಸಿದರು.
ಶಾಲಾ ಶಿಕ್ಷಕ ರಮೇಶ್ ಪ್ರಸ್ತಾವಿಕ ಮಾತು ಆಡಿದರು.ಶಿಕ್ಷಕಿ ದಿವ್ಯ ಸ್ವಾಗತಿಸಿ, ಶಿಕ್ಷಕಿ ಸುನಿತಾ.ಬಿ ಧನ್ಯವಾದ ನೀಡಿದರು.ಕಾರ್ಯಕ್ರಮವನ್ನು ಶಿಕ್ಷಕಿ ಮಮತಾ ಇವರು ನಿರೂಪಿಸಿದರು.ಮಕ್ಕಳ ಪೋಷಕರು ಊರವರು ಶಿಕ್ಷಕರು ಉಪಸ್ಥಿತರಿದ್ದರು.