ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಾಗೂ ತಾಲೂಕಿನ ಪ್ರತೀ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶವು ಮಾ.5ರಂದು ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳ ಸಮಾವೇಶವು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಜೈನ್ ಪೇಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ ಎಂದು ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.
ಈ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು, ಜಿಲ್ಲೆಯ ಹಾಗೂ ತಾಲೂಕಿನ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಹಕ್ಕು ಪತ್ರ ವಿತರಣೆ: ಬೆಳ್ತಂಗಡಿ ತಾಲೂಕಿನ ಸುಮಾರು 135 ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮವು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಯಾರಿಗೆ ಈ ಗ್ಯಾರಂಟಿ ಯೋಜನೆ ಯಿಂದ ವಂಚಿತರಾದವರು ಅಲ್ಲೇ ಅರ್ಜಿ ಸಲ್ಲಿಸಿದ್ದಲ್ಲಿ ಸಮಸ್ಯೆಗಳನ್ನು ಕೂಡ ಬಗೆಹರಿಸಲಾಗುವುದು ಎಂದರು.
ಪತ್ರಿಗೋಷ್ಠಿಯಲ್ಲಿ ಕೆ.ಎಂ.ನಾಗೇಶ್ ಕುಮಾರ್ ಗೌಡ, ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಬೆಳ್ತಂಗಡಿ, ಸಂತೋಷ್ ಕುಮಾರ್ ಜಿಲ್ಲಾ ಕೆಡಿಪಿ ಸದಸ್ಯರು, ಹಕೀಂ ಕೊಕ್ಕಡ ಅಧ್ಯಕ್ಷರು ಯುವ ಕಾಂಗ್ರೆಸ್ ಗ್ರಾಮೀಣ ಸಮಿತಿ ಬೆಳ್ತಂಗಡಿ, ಸುದರ್ಶನ್ ಶೆಟ್ಟಿ ಆರಂಬೋಡಿ ಯುವ ಕಾಂಗ್ರೆಸ್ ನಗರ ಸಮಿತಿ ಬೆಳ್ತಂಗಡಿ ಉಪಸ್ಥಿತರಿದ್ದರು.