ಉಜಿರೆ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಮಾ.01ರಂದು ಮಂಗಳೂರು ಫಾದರ್ ಮುಲ್ಲರ್ಸ್ ಕಾಲೇಜು ಮತ್ತು ಮಂಗಳೂರು ರೋಶನಿ ನಿಲಯ ಸಮಾಜಕಾರ್ಯ ವಿಭಾಗದ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಫಾದರ್ ಮುಲ್ಲರ್ಸ್ ಕಾಲೇಜು ವೈದ್ಯರುಗಳಾದ ವಿಯೋನಾ ಮರಿಯನ್ ಡಿ’ಸೋಜ, ಲಕ್ಷ್ಮೀ ಎಸ್.ಕುನ್ನತ್ ಮತ್ತು ತಂಡದವರು ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.
160ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‌ರವರು, ಟ್ರಸ್ಟೀ ಸದಸ್ಯೆ ಮೇರಿ ಯು.ಪಿ.ಯವರು, ಮ್ಯಾನೇಜರ್ ಸಂದ್ಯಾ ಸುಭಾಷ್‌ರವರು, ರೋಶನಿ ನಿಲಯದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
p>