




ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಸಂಸ್ಥೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜೋನ್ ರವರು ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ನೂತನವಾಗಿ ಆರಂಭಿಸಲಾದ ಮಾನಿನಿ ರಾಜ್ಯ ಮಹಿಳಾ ಒಕ್ಕೂಟದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.



ಕ್ರಾಸ್ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯದ 14 ಸಮಾಜ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ರಾಜ್ಯ ಒಕ್ಕೂಟದ ರಚನೆ ಹಾಗೂ ಸಾಮರ್ಥ್ಯವರ್ಧನಾ ತರಬೇತಿಯನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗಿತ್ತು.
ರಾಜ್ಯ ಒಕ್ಕೂಟಕ್ಕೆ ಆಯ್ಕೆ ಆದ ಇವರಿಗೆ ಡಿ.ಕೆ.ಆರ್.ಡಿ.ಎಸ್ ಸಂಸ್ಥೆ, ಒಕ್ಕೂಟ, ಮಹಾಸಂಘ ಮತ್ತು ಸಂಘಗಳ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.








