ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಇವರ ಜಂಟಿ ಆಶ್ರಯಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ ಮಾ.16ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಡಾ. ಹೇಮಾವತಿ ವಿ. ಹೆಗ್ಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸೆಲ್ಕೋ ಫೌಂಡೇಶನ್ ಸಂಸ್ಥಾಪಕ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಹರೀಶ್ ಹಂದೆ, ಸ್ವಾಮಿ ವಿವೇಕಾನಂದ ಯೂತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸವಿತಾ ಸುಳುಗೋಡು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್., ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಬೆಂಗಳೂರು ಸೆಲ್ಕೋ ಸೋಲಾರ್ ಲೈಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೋಹನ್ ಭಾಸ್ಕರ ಹೆಗಡೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಯೋಜನೆಯ ಯೋಜನಾಧಿಕಾರಿ ಶ್ರೀನಿವಾಸ ಪೂಜಾರಿ ಅತ್ತಾಜೆ, ಸೆಲ್ಕೋ ಸಂಸ್ಥೆಯ ಡಿ ಜಿ ಎಂ ಗುರು ಪ್ರಕಾಶ್, ಪ್ರಸನ್ನ ಹೆಗ್ಡೆ ನಿರೂಪಿಸಿದರು.
ವಿವಿಧ ಮಹಿಳಾ ಉದ್ಯಮಿಗಳು, ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸೆಲ್ಕೋ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.
ಉದ್ಘಾಟನೆಯ ಬಳಿಕ ವಿವಿಧ ವಿಚಾರ ಗೋಷ್ಠಿಗಳು ನಡೆಯಿತು.