ಬೆಳ್ತಂಗಡಿ: ಮಂಡಲ ಹಿಂದುಳಿದ ವರ್ಗ ಮೋರ್ಚಾದ ಪ್ರಥಮ ಪೂರ್ಣ ಪ್ರಮಾಣದ ಸಭೆಯನ್ನು ಮಾ.16ರಂದು ಹಿಂದುಳಿದ ವರ್ಗ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಗೆ ವಿಶೇಷವಾಗಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ಮಹೇಶ್ ಜೋಗಿ ಮತ್ತು ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಶಶಿಧರ ಕಲ್ಮಂಜ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಗಳಾದ ರವಿ ಸೋಲೂರು ಮತ್ತು ಮತ್ತು ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪ್ರದಾನ ಕಾರ್ಯದರ್ಶಿಗಳಾದ ವಿಠಲ ಆಚಾರ್ಯ, ಸುಧೀರ್ ಭಂಡಾರಿ ಮತ್ತು ಮೋರ್ಚಾದ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರುಗಳು, ತಾಲೂಕಿನ ಅಧ್ಯಕ್ಷರು ಮತ್ತು ಜಿಲ್ಲಾ ಮೋರ್ಚಾದ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
p>