ತುಮಕೂರು ಮೂವರ ಕೊಲೆ ಪ್ರಕರಣ: ಮೃತ ವ್ಯಕ್ತಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್ ಭೇಟಿ

0

ಬೆಳ್ತಂಗಡಿ: ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಅವರು ತುಮಕೂರಿನಲ್ಲಿ ಹತ್ಯಗೀಡಾದ ಬೆಳ್ತಂಗಡಿ ತಾಲೂಕಿನ ಮೂವರು ವ್ಯಕ್ತಿಗಳ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಸೋಮವಾರ ಬೆಳಿಗ್ಗೆ(ಮಾ.25)ರಂದು ಬೆಳ್ತಂಗಡಿಗೆ ಆಗಮಿಸಿದ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಅವರು ಮದ್ದಡ್ಕದ ಇಸಾಕ್ ಮನೆಗೆ, ಶಿರ್ಲಾಲಿನ ಇಮ್ತಿಯಾಜ್ ಯಾನೆ ಸಿದ್ದಿಕ್ ಮನೆಗೆ, ಉಜಿರೆಯ ಸಾಹುಲ್ ಹಮೀದ್ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರುಗಳೊಂದಿಗೆ ಮಾತುಕತೆ ನಡೆಸಿದರು.

ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಯು.ಟಿ ಖಾದರ್ ಅವರು ಇದೊಂದು ಅತ್ಯಂತ ಹೇಯ ಕೃತ್ಯವಾಗಿದೆ. ಈಗಾಗಲೇ ಗೃಹ ಸಚಿವರೊಂದಿಗೆ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಮೃತದೇಹಗಳ ಡಿ.ಎನ್.ಎ ಪರೀಕ್ಷೆ ನಡೆಸಿ ಸಾಧ್ಯವಾದಷ್ಟು ವೇಗವಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಲು ಕೋರಿದ್ದೇನೆ ಪೊಲೀಸರು ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಂಡು ಬಳಿಕ ಮೃತದೇಹಗಳನ್ನು ಹಸ್ತಾಂತರಿಸಲಿದ್ದಾರೆ.

ಇದೊಂದು ದೊಡ್ಡ ಮೋಸದ ಜಾಲವಾಗಿದ್ದು ಇದರ ಹಿಂದಿರುವವರ ಬಗ್ಗೆ ಸಮಗ್ರವಾದ ತನಿಖೆಯಾಗಿ ಎಲ್ಲರನ್ನೂ ಕಾನೂನಿನ ಮುಂದೆ ತರುವ ಕಾರ್ಯ ಮಾಡಬೇಕಾಗಿದೆ.ಈಗಾಗಲೇ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಎಲ್ಲ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಇನ್ನು ಯಾರೂ ಇಂತಹ ಜಾಲಕ್ಕೆ ಬಲಿಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳ ಇವೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಇವರೊಂದಿಗೆ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ಜಿಲ್ಲಾ ಪಂಚಾಯತು ಸದಸ್ಯರುಗಳಾದ ಸಾಹುಲ್ ಹಮೀದ್, ಧರಣೇಂದ್ರ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಇತರ ಮುಖಂಡರುಗಳು ಇದ್ದರು.

p>

LEAVE A REPLY

Please enter your comment!
Please enter your name here