ಬೆಳ್ತಂಗಡಿ: ಮಹಿಳಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಮಂಗಳೂರು ದ.ಕ.ಜಿಲ್ಲಾ ಕೆಂದ್ರ ಸಹಕಾರಿ ಬ್ಯಾಂಕ್ ನ ಮಾಲ ಎಂ.ಕೆ ಭಾಗವಹಿಸಿ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬಂದು ಸ್ವಾಭಿಮಾನದಿಂದ ಬದುಕುವಂತೆ ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೇಡಿ ಜೆಸಿ ಸಂಯೋಜಕಿ ಶ್ರುತಿ ರಂಜಿತ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ನಿವೃತ್ತ ಶಿಕ್ಷಕಿ ಉಮಾ ಆರ್ ರಾವ್, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿರುವ ಸಂಘಟಕಿ, ಮಹಿಳಾ ಮಂಡಲಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಶಾಂತಾ ಬಂಗೇರಾ, ಕಲಾವಿದರೂ, ಲಾಯಿಲ ಗ್ರಾಮ ಪಂಚಾಯತ್ ನ ಸದಸ್ಯೆ ಆಶಾಲತಾ ಪ್ರಶಾಂತ್,ದೆಹಲಿಯ ರಿಪಬ್ಲಿಕ್ ಡೇ ಪೆರೇಡ್ ನಲ್ಲಿ ಭಾಗವಹಿಸಿದ ಎಸ್. ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ರಾಧಿಕಾ ಸಿ. ಎಸ್. ಇವರನ್ನು ಸನ್ಮಾನಿಸಲಾಯಿತು.
ಘಟಕದ ಅಧ್ಯಕ್ಷ ರಂಜಿತ್ ಎಚ್. ಡಿ. ಸ್ವಾಗತಿಸಿ ಮಹಿಳಾ ದಿನಾಚರಣೆಯ ಮುಖಾಂತರ ನಡೆದ ಐದು ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.
ವೇದಿಕೆ ಆಹ್ವಾನವನ್ನು ಸದಸ್ಯೆ ಸ್ವಾತಿ ಪ್ರೀತೇಶ್, ಸನ್ಮಾನ ಪತ್ರಗಳನ್ನು ಕಾರ್ಯಕ್ರಮದ ಸಂಯೋಜಕಿ ಹೇಮಾವತಿ ಕೆ, ಮಧುರ ರಾಘವ್ ವಾಚಿಸಿದರು. ಕಾರ್ಯಕ್ರಮದಲ್ಲಿ ಘಟಕದ ಪೂರ್ವ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.ಕಾರ್ಯದರ್ಶಿ ಅನುದೀಪ್ ಜೈನ್ ವಂದಿಸಿದರು