ಬಳ್ಳಮಂಜ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ- ಮಹಾರಥೊತ್ಸವ, ಮಹಾಪೂಜೆ, ಶ್ರೀ ಭೂತ ಬಲಿ

0

ಮಚ್ಚಿನ: ಇತಿಹಾಸ ಪ್ರಸಿದ್ಧ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆಯು ಎಪ್ರಿಲ್ 23ರಿಂದ ಮೇ 2ರವರೆಗೆ ನಡೆಯಲಿದ್ದು ಏ. 30ರಂದು ಮಹಾರಥೊತ್ಸವ ನಡೆಯಿತು.

ಬೆಳಿಗ್ಗೆ ದರ್ಶನ ಬಲಿ, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನ ಸಂತರ್ಪಣೆ, ಸಂಜೆ ಮಹಾರಥೋತ್ಸವ, ಮಹಾಪೂಜೆ, ಶ್ರೀ ಭೂತ ಬಲಿ ನಡೆಯಿತು.

ದೇವಾಲಯದ ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಎಂ.ಹರ್ಷ ಸಂಪಿಗೆತ್ತಾಯ, ಊರ ಗಣ್ಯರು ಊರವರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

p>

LEAVE A REPLY

Please enter your comment!
Please enter your name here