ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಗೆ 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಒಟ್ಟು 33 ವಿದ್ಯಾರ್ಥಿಗಳು ಹಾಜರಾಗಿದ್ದು, 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಮೊಟ್ಟಮೊದಲ ಬಾರಿಗೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶಕ್ಕೆ ಕಾರಣರಾದ ಎಲ್ಲಾ ವಿದ್ಯಾರ್ಥಿಗಳನ್ನು, ಶಾಲಾ ಶಿಕ್ಷಕರನ್ನು ಮತ್ತು ಬಹುಮುಖ್ಯ ವಾಗಿ ವಿದ್ಯಾರ್ಥಿಗಳ ಪೋಷಕರನ್ನು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಊರ ವಿದ್ಯಾಭಿಮಾನಿಗಳು ಅಭಿನಂದಿಸಿದ್ದಾರೆ.
p>