ಗುರುವಾಯನಕೆರೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡ ಕುಟುಂಬಗಳ ಸಮಗ್ರ ಅಭಿವೃದ್ಧಿಯೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ದ್ಯೆಯ ಆಗಿದೆ ಎಂದು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ ಹೇಳಿದರು.ಅವರು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಡವರ ಪರಿವರ್ತನೆಗೆ ಯೋಜನೆಯನ್ನು ಜಾರಿಗೆ ತಂದು ಬಡತನ ನಿರ್ಮೂಲನೆ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನ ಇಟ್ಟಿದ್ದಾರೆ ಎಂದರು
ಇದರ ಪರಿಣಾಮ ಬೆಳ್ತಂಗಡಿ ತಾಲೂಕಿನಲ್ಲಿ ಬಡವರ ಬದುಕಿನಲ್ಲಿ ಆಮೂಲಾಗ್ರ ಬದಲಾವಣೆ ಆಗಿದೆ ಎಂದು ವಿವರಿಸಿದರು.
ಒಕ್ಕೂಟದ ಅಧ್ಯಕ್ಷರು ಒಕ್ಕೂಟದ ಕಣ್ಣಾಗಿರಬೇಕು ಕಣ್ಣಲ್ಲಿ ಕಣ್ಣಿಟ್ಟು ಕಾಪಾಡುವ ಹೊಣಗಾರಿಕೆ ಒಕ್ಕೂಟದ ಅಧ್ಯಕ್ಷರಿಗೆ ಇದೆ ಎಂದು ಹೇಳಿದರು.ಒಕ್ಕೂಟದ ಕಣ್ಣು ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ ಒಕ್ಕೂಟ ಮಂಕಗಬಹುದು ಎಂದು ಎಚ್ಚರಿಕೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಕಲ್ಪದಿಂದ ಒಕ್ಕೂಟದ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಗುಂಪಿನ ಸದಸ್ಯರ ಬೇಡಿಕೆಗೆ ಅನುಗುಣವಾಗಿ ಯೋಜನೆಯೂ ಬ್ಯಾಂಕಿನ ಜೊತೆ ಒಪ್ಪಂದ ಮಾಡಿಕೊಂಡು ಗುಂಪಿನ ಸದಸ್ಯರಿಗೆ ಅರ್ಥಿಕ ಸಹಕಾರವನ್ನು ಒದಗಿಸುತ್ತಿದೆ ಎಂದರು.
ಯೋಜನೆಯ ಸೌಲಭ್ಯ ಗಳನ್ನ ಒದಗಿಸುವುದೇ ಒಕ್ಕೂಟದ ಪದಾಧಿಕಾರಿ ಗಳ ಆದ್ಯ ಕರ್ತವ್ಯವಾಗಿದೆ ಎಂದರು.ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರಾ, ನಿಕಟ ಪೂರ್ವ ಅದ್ಯಕರಾದ ಪ್ರಬಾಕರ್ ಪಸಂದೋಡಿ, ವಲಯ ಅಧ್ಯಕ್ಷ ರಮಾನಂದ ಪೂಜಾರಿ, ಜಯಶಂಕರ್ ಹೆಗ್ಡೆ, ಸತೀಶ್ ಆಚಾರ್ಯ, ರಾಮಣ್ಣ ಗೌಡ, ಎಲ್ಲಾ ಒಕ್ಕೂಟಗಳ ಅಧ್ಯಕ್ಷ ರುಗಳೂ ಭಾಗವಹಿಸಿದ್ದರು.