ಬೆಳ್ತಂಗಡಿ: ಸಂತಕಟ್ಟೆ ಬಳಿ ಕಾರು ಕಾರುಗಳ ನಡುವೆ ಡಿಕ್ಕಿ ನಡೆದ ಘಟನೆ ಮೇ 19ರಂದು ಸಂಜೆ ನಡೆದಿದೆ.
ಓರ್ವನ ಸ್ಥಿತಿ ಗಂಭೀರವಾಗಿದ್ದು ಮತ್ತು ಮತ್ತೊಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.ಘಟನಾ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿದೆ.
ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.