ಬೆಳ್ತಂಗಡಿ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಮೇ 27ರಂದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀನಿವಾಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ಎಲ್ ಭೋಜೇಗೌಡ ಅವರು ಭೇಟಿ ನೀಡಿದರು.
ಶ್ರೀನಿವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರು ಮತ್ತು ಅಧ್ಯಕ್ಷ ಡಾ.ಸಿ.ಎ ರಾಘವೇಂದ್ರ ಅವರನ್ನು ಭೇಟಿ ಮಾಡಿ ಮತ್ತು ಆಡಳಿತ ವರ್ಗ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ಸಂವಾದ ನಡೆಸಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ವಿಜಯಶಾಲಿಯನ್ನಾಗಿ ಮಾಡಬೇಕೆಂದು ಮತಯಾಚಿಸಿದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು, ಸ್ಥಳೀಯ ಬಿಜೆಪಿ ಮುಖಂಡರು ಆಡಳಿತ ವರ್ಗ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.