ಅರಸಿನಮಕ್ಕಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ಅರಸಿನಮಕ್ಕಿ: ಅರಸಿನಮಕ್ಕಿ ವಲಯದ ಹತ್ಯಡ್ಕ ಎ ಮತ್ತು ಹತ್ಯಡ್ಕ ಬಿ ಒಕ್ಕೂಟಗಳ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಬೂಡುಮುಗೇರು ದೇವಸ್ಥಾನದಲ್ಲಿ ಒಕ್ಕೂಟದ ಎಲ್ಲ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ನಡೆಸಲಾಯಿತು.

ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ವೃತಾಧಾರಿಗಳು ಭಾಗಿಯಾಗಿದ್ದರು.

ಪೂಜಾ ಕಾರ್ಯಕ್ರಮ ನಡೆದ ಬಳಿಕ ಸಿದ್ಧಿವಿನಾಯಕ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಸಲಾಯಿತು.

ಪೂಜಾ ಕಾರ್ಯಕ್ರಮವು 2 ಒಕ್ಕೂಟದ ಪದಾಧಿಕಾರಿಗಳು ಹಾಗೂ ಪೂಜಾ ಸಮಿತಿಯ ಅಧ್ಯಕ್ಷ ಲಿಂಗಪ್ಪಗೌಡ ಇವರ ನೇತೃತ್ವದಲ್ಲಿ ಪೂಜೆ ನಡೆಯಿತು.

LEAVE A REPLY

Please enter your comment!
Please enter your name here