ಉಜಿರೆ ವಲಯದ ಮಾಚಾರು ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಮಾಚಾರು ತ್ರೈಮಾಸಿಕ ಸಭೆಯು ಬದನಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷ ಉಮ್ಮರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ನೂತನ ಒಕ್ಕೂಟದ ಅಧ್ಯಕ್ಷ ಉಮ್ಮರ್ ರವರು ಒಕ್ಕೂಟ ಸಭೆಯನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ದಿವ್ಯಜ್ಯೋತಿ ಎಸ್ ಹೆಚ್ ಜಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಹರಿಣಾಕ್ಷಿ ಮಂಡಿಸಿದರು.

ಒಕ್ಕೂಟದ ಗತ ಸಭೆಯ ವರದಿಯನ್ನು ಒಕ್ಕೂಟದ ಕಾರ್ಯದರ್ಶಿಯವರು ಮಂಡಿಸಿದರು.

ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ವಲಯದ ಮೇಲ್ವಿಚಾರಕಿ ವನಿತಾ ರವರು ಉಪಸ್ಥಿತರಿದ್ದರು.

ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಹೇಮಲತಾರವರು ಉಪಸ್ಥಿತರಿದ್ದರು.

ಮೋಹಿನಿ ಕಾರ್ಯಕ್ರಮವನ್ನು ಸ್ವಾಗತಿಸಿ, ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here