ಕಳೆಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವಾಕಿಂಗ್ ಸ್ಟಿಕ್ ವಿತರಣೆ

0

ಕಳೆಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳ ವಲಯದ ಕಳೆಂಜ ಗ್ರಾಮದ ಕೆರೆಕೋಡಿ ಎಂಬಲ್ಲಿ ವಾಸಿಸುತ್ತಿರುವ ಪಿ.ವಿ.ಪೌಲೋಸ್ ರವರಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಡೆಗಯವರು ಉಚಿತವಾಗಿ ನೀಡಿರುವ ವಾಕಿಂಗ್ ಸ್ಟಿಕ್ ಸಮಾಜ ಸೇವಕರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಜೆಸಿಐ ಅಧ್ಯಕ್ಷ ಸಂತೋಷ್ ಜೈನ್, ಕಳೆಂಜ ಬಿ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಗ್ರಾಮ ಪಂಚಾಯತಿ ಸದಸ್ಯೆ ಪ್ರೇಮ ಬಿ ಎಸ್, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಸೇವಾಪ್ರತಿನಿಧಿ ಭವಾನಿಯವರು ಉಪಸ್ಥಿತರಿದ್ದು ಹಸ್ತಾಂತರಿಸಲಾಯಿತು.

LEAVE A REPLY

Please enter your comment!
Please enter your name here