ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ ಹಾಗೂ ಎಸ್.ಎಸ್.ಎಲ್.ಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

0

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮೇ 31ರಂದು ಉಜಿರೆ ಅನುಗ್ರಹ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಲಾ ನೂತನ ಸಂಚಾಲಕ ವಂ.ಅಬೆಲ್ ಲೋಬೊ ಉದ್ಘಾಟಿಸಿ ಶುಭ ಹಾರೈಸಿದರು.

ನೂತನ ಸಂಚಾಲಕರಿಗೆ ಹೂ ಗುಚ್ಚ ನೀಡಿ ಗೌರವಿಸಲಾಯಿತು.

ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.

ನೂತನ ಸಂಚಾಲಕ ವಂ.ಫಾ.ಅಬೆಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು.

ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ವಂ.ಫಾ.ವಿಜಯ್ ಲೋಬೊ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಶಿಕ್ಷಕ ರವಿ ವಂದಿಸಿ, ಶಿಕ್ಷಕಿ ವಿನಯಲತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here