ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಮೇ 31ರಂದು ಆರಂಭವಾಯಿತು.
ಉದ್ಘಾಟನಾ ಸಮಾರಂಭವು ಮಕ್ಕಳ ಉತ್ಸಾಹಭರಿತ ಭಾಗವಹಿಸುವಿಕೆಯಿಂದ, ಹಳೆಯ ಕಟ್ಟಡದಿಂದ ಹೊಸ ಶಾಲಾ ಆವರಣದವರೆಗೆ ಅದ್ದೂರಿ ಮೆರವಣಿಗೆಯಿಂದ ಆರಂಭವಾಯಿತು.
ಈ ಕಾರ್ಯಕ್ರಮಕ್ಕೆ ಶಾಲೆಯ ಅಧ್ಯಕ್ಷರು ಮತ್ತು ಮುಖ್ಯ ಗುರುಗಳ ಸಾನ್ನಿಧ್ಯ ಲಭಿಸಿತು.
ಮಕ್ಕಳಿಗೆ ಸಿಹಿ ತಿಂಡಿಯನ್ನು ಹಂಚಲಾಯಿತು.
p>