ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ಪ್ರಾರಂಬೊತ್ಸವವನ್ನು ನಡೆಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಶುಭ ಹಾರೈಸಿದರು.

ಹೊಸದಾಗಿ ಸೇರಿದ ಮಕ್ಕಳಿಗೆ ಪನ್ನೀರು ಹಾಕಿ, ಆರತಿ ಬೆಳಗಿ, ಪುಸ್ತಕ, ಬಳಪ, ಸ್ಲೇಟು ಕೊಟ್ಟು ಸ್ವಾಗತ ಕೋರಲಾಯಿತು.

ಶಾಲಾ ಮುಖ್ಯೋಪಾಧ್ಯಾಯ ಪಿ.ಸುಬ್ರಹ್ಮಣ್ಯ ರಾವ್ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಎಸ್.ಡಿ.ಯಂ.ಸಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಆಡಳಿತ ಮಂಡಳಿಯ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಶಿಕ್ಷಕ ವೃoದದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here