ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

0

ಬೆಳ್ತಂಗಡಿ: ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ಮ್ಯಾನೇಜ್ ಮೆಂಟ್ ವಿಭಾಗದ ವತಿಯಿಂದ ನಡೆದ ವಾಣಿಜ್ಯೋದ್ಯಮ ಕಾರ್ಯಾಗಾರದಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು, ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಹಸ್ತವಿ ಮತ್ತು ಶಮೀಮಾ ಬಾನು ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಚಂದನ ಕೊಲ್ಯಾಜ್ ಮೇಕಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರಿಗೆ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here