

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಶ್ರೀನಿವಾಸ ನಾಯ್ಕ ಮೇ 31ರಂದು ಸೇವಾ ನಿವೃತ್ತರಾದರು.
1987ರಿಂದ ಜವಾನರಾಗಿ ವೃತ್ತಿ ಜೀವನ ಪ್ರಾರಂಭಿಸಿ, ಗುಮಾಸ್ತ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಒಟ್ಟು 37 ವರ್ಷ ಸಂಘದಲ್ಲಿ ಕರ್ತವ್ಯ ನಿರ್ವಹಿಸಿದ್ದರು.