ಮುಂಡಾಜೆ: ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಗಿಡವನ್ನು ಹಸ್ತಾಂತರಿಸುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿ’ಸೋಜಾ ಮಾತನಾಡಿ, ‘ಪ್ರತಿಯೊಬ್ಬರೂ ಒಂದೊಂದು ಗಿಡವನ್ನು ನೆಟ್ಟು ಪೋಷಿಸಬೇಕು.ನೀರನ್ನು ಹಿತಮಿತವಾಗಿ ಬಳಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರೊಂದಿಗೆ ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸಬೇಕು. ಪ್ರಾಣಿ ಸಂಕುಲವನ್ನು ಕಾಪಾಡಬೇಕು ಎಂದರು’.
ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮಾನ್ ನಾರಾಯಣಗೌಡ ಕೊಳಂಬೆ ಇವರು ವಿದ್ಯಾರ್ಥಿಗಳಿಗೆ ಗಿಡವನ್ನು ಹಸ್ತಾಂತರಿಸಿದರು.
ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ನಮಿತಾ ಕೆ.ಆರ್, ಸಹ ಕಾರ್ಯಕ್ರಮಾಧಿಕಾರಿ ಸಂದೀಪ್ ಐ ಉಪಸ್ಥಿತರಿದ್ದರು.
ಸ್ವಯಂಸೇವಕ ಧನುಷ್ ಕೆ ಎನ್ ಕಾರ್ಯಕ್ರಮದ ನಿರೂಪಣೆ ಮಾಡಿ, ಸ್ವಾಗತಿಸಿ, ಲತೇಶ್ ಧನ್ಯವಾದವಿತ್ತರು.
p>