

ಮಚ್ಚಿನ: ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ವತಿಯಿಂದ ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಕಾರ್ಯನಿರ್ವಾಹಕ ನೌಕರ ಸಂಘದ ಆನಂದ, ರಮೇಶ್, ನವೀನ್ ಊರ್ಲಬೆಟ್ಟು ಇವರು ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನವೀನ್ ಕೋಡಿ, ಭಾಗ್ಯಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಮೋಹಿನಿ, ಶಾಲಾ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಶಿವಪ್ಪ, ಮಹಾಬಲ ದೇವಾಡಿಗ, ಶಿಕ್ಷಕಿ ರೂಪ, ಚಿರಂಜೀನಿ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.