ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ.ಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಮಡಂತ್ಯಾರು: ರಾಜಸ್ಥಾನದ ಅಲ್ವಾರಿನ ಎಲ್ ಐ ಇ ಟಿ ಕಾಲೇಜಿನಲ್ಲಿ ಜೂನ್ 12ರಿಂದ 15 ರವರೆಗೆ ಜರಗಲಿರುವ 8ನೇ ರಾಷ್ಟ್ರ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸಲಿದ್ದಾರೆ.

ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here